ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ರಂಜಿತ್ ಜೈನ್ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಹೆಚ್ಐವಿ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಿ ಮಾಹಿತಿ ಪೂರ್ಣ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರಶಾಂತ ಶೆಟ್ಟಿ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ತೇಜಸ್ವೀ ಭಟ್ ಉಪಸ್ಥಿತರಿದ್ದರು. ಎನ್ಎಸ್ಎಸ್ ಸ್ವಯಂಸೇವಕರಾದ ಅಭಿನವ್ ಸ್ವಾಗತಿಸಿ, ಚಂದ್ರಶೇಖರ್ ನಿರೂಪಿಸಿ, ರಿತೇಶ್ ವಂದಿಸಿದರು.