ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮವು ಇಂದು ಎಕ್ಸಲೆಂಟ್ ಕಾಲೇಜಿನ ಕ್ರೀಡಾಂಗಣದಲ್ಲಿ ಜರುಗಿತು
ಮಂಗಳೂರು ನಗರ ಉತ್ತರ ಪೊಲೀಸ್ ಉಪವಲಯದ ಅಸಿಸ್ಟೆಂಟ್ ಕಮಿಷನರ್ ಆದ ಶ್ರೀ ಮನೋಜ್ ಕುಮಾರ್ ನಾಯಕ್ ಹಾಗೂ ಮಾಜಿ ಯೋಧರು ಹಾಗೂ ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಿದ್ದರು, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿತಾ ಜೈನ್, ಸಂಚಾಲಕರಾದ ಶ್ರೀ ಬಿ.ಪಿ ಸಂಪತ್ ಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಶ್ರೀ ಶಿವಪ್ರಸಾದ್ ಭಟ್ ಸೇರಿದಂತೆ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.