ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ರಾಮಧ್ಯಾನ - ರಾಮೋತ್ಸವ

ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ರಾಮಧ್ಯಾನ ಅಯೋಧ್ಯೆಯಲ್ಲಿ ಬಾಲರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವ ನಡೆಯುತ್ತಿರುವ ಪ್ರಯುಕ್ತ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ರಾಮಧ್ಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಯುವರಾಜ ಜೈನ್ ರಾಮನ ಆದರ್ಶಮಯ ಬದುಕನ್ನು ಪ್ರಸ್ತುತ ಪಡಿಸುತ್ತ ರಾಮನಿಗೆ ವಚನಕುಸುಮಾಂಜಲಿಯನ್ನು ಸಮರ್ಪಿಸಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿತಾ ಜೈನ್, ಪ್ರಾಂಶುಪಾಲರಾದ ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ, ಪ್ರೌಢಶಾಲೆಯ ಉಪಮುಖ್ಯೋಪಾಧ್ಯಾಯರಾದ ಶ್ರೀ ಜಯಶೀಲ ಉಪಸ್ಥಿತರಿದ್ದರು. ಭಾಷಾ ವಿಭಾಗ ಮುಖ್ಯಸ್ಥ ವಿಕ್ರಮ್ ನಾಯಕ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಸ್ಕೃತ ಉಪನ್ಯಾಸಕ ತೇಜಸ್ವೀ ಭಟ್ ನಿರೂಪಿಸಿ ವಂದಿಸಿದರು.