ದ.ಕ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಚದುರಂಗ ಪಂದ್ಯಾಟವನ್ನು ಎಕ್ಸಲೆಂಟ್ ಕ್ಯಾಂಪಸ್‌ನಲ್ಲಿ ಆಯೋಜಿಸಲಾಯಿತು.
ಕೆಎಂಎಫ್ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಸ್ಪರ್ಧೆಯನ್ನು ಉದ್ಘಾಟಿಸಿದರು. ರಾಷ್ಟದ ಉನ್ನತಿಗೆ ಬೌದ್ಧಿಕತೆ ಬಹಳ ಮುಖ್ಯ. ಇಂದಿನ ಚೆಸ್ ಪಂದ್ಯಾಟದಲ್ಲಿ ತಮ್ಮ ಬುದ್ಧಿವಂತಿಕೆಯನ್ನು ಪ್ರದರ್ಶಿಸುವುದರ ಜೊತೆಗೆ ರಾಷ್ಟ್ರದ ಅಭಿವೃದ್ಧಿಯಲ್ಲೂ ತಮ್ಮಿಂದ ಅಪಾರವಾದ ಕೊಡುಗೆಯನ್ನು ವಿದ್ಯಾರ್ಥಿಗಳು ನೀಡಬೇಕು. ವಿದ್ಯಾರ್ಥಿಗಳ ಬೌದ್ಧಿಕತೆ ಪೂರಕವಾದ ವಾತಾವರಣ ಎಕ್ಸಲೆಂಟ್ ಕಾಲೇಜಿನಲ್ಲಿದೆ ಎಂದರು.
ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಅಧ್ಯಕ್ಷತೆವಹಿಸಿದರು. ಶಿಕ್ಷಣದ ಬಹುಮುಖ್ಯ ಉದ್ದೇಶ ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆ. ಇ೦ದಿನ ಚದುರಂಗದಾಟ ಬೌದ್ಧಿಕ ಬೆಳವಣಿಗೆಗೆ ಪೂರಕವಾಗಿದೆ ಎಂದರು.
ಕೆ.ಪಿ ಸುಚರಿತ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.
ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾಕೂಟ ಸಂಯೋಜಕ ಪ್ರೇಮನಾಥ ಶೆಟ್ಟಿ, ವೀಕ್ಷಕರಾದ ನವೀನ್ ಹೆಗ್ಡೆ, ತೀರ್ಪುಗಾರರಾದ ಪ್ರಸನ್ನರಾವ್ ಉಪಸ್ಥಿತರಿದ್ದರು.
ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್‌ಕುಮಾರ್ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕ ಡಾ.ವಾದಿರಾಜ ಕಲ್ಲೂರಾಯ ಉದ್ಘಾಟಕರನ್ನು ಪರಿಚಯಿಸಿದರು.ದೈಹಿಕ ಶಿಕ್ಷಕ ರಾಜ್ ಪ್ರಸಾದ್ ವಂದಿಸಿದರು. ಉಪನ್ಯಾಸಕ ವಿಕ್ರಮ ನಾಯಕ್ ಕಾರ್ಯಕ್ರಮ ನಿರೂಪಿಸಿದರು.