ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ 'ರಾಜ ಸಭಾಂಗಣ'ದಲ್ಲಿಂದು Cyberverse Foundation ಸಹಯೋಗದಲ್ಲಿ 'Cyber Security School Hygiene' ಕಾರ್ಯಕ್ರಮವು ಉದ್ಘಾಟನೆಗೊಂಡಿತು.
ಮೈಸೂರು ಸಂಸ್ಥಾನದ ಶ್ರೀಮನ್ಮಹಾರಾಜರಾದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಯುವರಾಜ ಜೈನ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಎಸ್.ಡಿ.ಎಂ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಡಾ.ಸತೀಶ್ ಚಂದ್ರ ಎಸ್, ಶ್ರೀ ಸಿದ್ದಿವಿನಾಯಕ ರೆಸಿಡೆನ್ಸಿಯಲ್ ಶಾಲಾ ಕಾರ್ಯದರ್ಶಿಗಳಾದ ಶ್ರೀ ಶರಣ್ ಕುಮಾರ್, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿತಾ ಜೈನ್, ಪ್ರಾಂಶುಪಾಲರಾದ ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಶ್ರೀ ಶಿವಪ್ರಸಾದ್ ಭಟ್,ಶ್ರೀ ಪದ್ಮಪ್ರಸಾದ್ ಜೈನ್ ಸೇರಿದಂತೆ ಉಪನ್ಯಾಸಕ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.