ಕಲ್ಲಬೆಟ್ಟು: ೧೫ ಸಪ್ಟೆಂಬರ್ :
ಮೂಡುಬಿದಿರೆ ಎಕ್ಸಲೆಂಟ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಅಂತಾರಾಷ್ಟ್ರಿಯ ಪ್ರಜಾಪ್ರಭುತ್ವದ ದಿನಾಚರಣೆಯನ್ನು ಆಚರಿಸಲಾಯಿತು.
ಈ ಪ್ರಯುಕ್ತ ಭಾರತೀಯ ಸಂವಿಧಾನ ಪೀಠಿಕೆಯನ್ನು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ತೇಜಸ್ವೀ ಭಟ್ ಬೋಧಿಸಿದರು.
ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸಂಧ್ಯಾ ನಾಯಕ್ ರವರು ಪ್ರಜಾಪ್ರಭುತ್ವ ದಿನದ ಮಹತ್ವವನ್ನು ಸ್ವಯಂ ಸೇವಕರಿಗೆ ತಿಳಿಸಿದರು.
ವಾಣಿಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರಶಾಂತ್ ಶೆಟ್ಟಿ, ಗಣಕ ಶಾಸ್ತ್ರ ವಿಭಾಗ ಮುಖ್ಯಸ್ಥ ಪುರುಷೋತ್ತಮ ತುಳುಪುಳೆ, ಸಂಖ್ಯಾಶಾಸ್ತ್ರ ಉಪನ್ಯಾಸಕ ಪ್ರದೀಪ್ ಕೆ ಪಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ಚೈತ್ರಾ ಶೆಟ್ಟಿ ಉಪಸ್ಥಿತರಿದ್ದರು.