ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ ಶಿಕ್ಷಣ) ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಎಕ್ಸಲೆಂಟ್ ಪದವಿ ಕಾಲೇಜು, ಮೂಡುಬಿದಿರೆ ಇದರ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ - 2023-24 ರ "ಉದ್ಘಾಟನಾ ಸಮಾರಂಭ"ವು ಕಾಲೇಜಿನ ರಾಜ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸಿದ್ಧಕಟ್ಟೆಯ ಪ್ರಖ್ಯಾತ ಆಯುರ್ವೇದ ವೈದ್ಯರಾದ ಡಾ. ಸುದೀಪ್ ಕುಮಾರ್ ಅವರು ಉದ್ಘಾಟಿಸಿದರು, ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿತಾ ಜೈನ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಶ್ರೀ ಮನೋಜ್ ಉಪಸ್ಥಿತರಿದ್ದರು.
ಆಂಗ್ಲಭಾಷಾ ಉಪನ್ಯಾಸಕರಾದ ಶ್ರೀ ವಿಕ್ರಮ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು,ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು,ಶ್ರೀಮತಿ ಯಶಸ್ವಿನಿಯವರು ವಂದಿಸಿದರು.