ಎಕ್ಸಲೆಂಟ್ ಕಾಲೇಜಿನಲ್ಲಿ ಕನ್ನಡ ರಾಜೋತ್ಸವ

ಎಕ್ಸಲೆಂಟ್ ಕಾಲೇಜಿನಲ್ಲಿ ಕನ್ನಡ ರಾಜೋತ್ಸವ : ಕನ್ನಡವೆಂದರೆ ಬರಿಯ ಭಾಷೆಯಲ್ಲ ಅದು ಕನ್ನಡಿಗರ ಬದುಕು. ಕನ್ನಡ ನಾಡು ನುಡಿಯ ಬಗ್ಗೆ ಗೌರವ ಇಟ್ಟುಕೊಳ್ಳುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ ಕನ್ನಡಿಗರು ಮೊದಲು ಕನ್ನಡದವರಾಗಬೇಕು ಎಂದು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಹೇಳಿದರು. ಅವರು ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ‘ಕರ್ನಾಟಕ ಸಂಭ್ರಮ 50’ ಉದ್ಘಾಟಿಸಿ ಮಾತನಾಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಮಾತನಾಡಿ ಕರ್ನಾಟಕ ಹಲವು ಭಾಷೆಗಳ ಸಂಗಮ ವ್ಯವಹಾರಿಕವಾಗಿ ನಾವು ಬೇರೆ ಭಾಷೆಗಳನ್ನು ಒಪ್ಪಿಕೊಂಡಿದ್ದರೂ ಕನ್ನಡಕ್ಕೆ ನಮ್ಮ ಹೃದಯದಲ್ಲಿ ಸ್ಥಾನ ಕೊಡಬೇಕು ಎಂದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳಿಂದ ಕರ್ನಾಟಕ ಸುವರ್ಣ ಸಂಭ್ರಮ ಗೀತ ಗಾಯನ ನಡೆಯಿತು. ಸುವರ್ಣ ಸಂಭ್ರಮದ ನೆನಪಿಗಾಗಿ ಸ್ವಚ್ಛ ಭಾಷಾ ಅಭಿಯಾನ ಪ್ರಾರಂಭಿಸಲಾಯಿತು. ಉಪನ್ಯಾಸಕ ಡಾ| ವಾದಿರಾಜ ಕಲ್ಲೂರಾಯ ಕಾರ್ಯಕ್ರಮ ನಿರೂಪಿಸಿದರು.

Click here to View All