ಎಕ್ಸಲೆಂಟ್ ಸಂಸ್ಥೆಗೆ ಸ್ವಾಮೀಜಿದ್ವಯರ ಭೇಟಿ

ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ವಿದ್ಯಾಸಂಸ್ಥೆಗೆ ತಿಪಟೂರು ನೊಣವಿನಕೆರೆಯಕಾಡ ಸಿದ್ದೇಶ್ವರ ಮಠದ ಶ್ರೀ ಶ್ರೀಅಭಿನವಕಾಡ ಸಿದ್ದೇಶ್ವರ ಸ್ವಾಮೀಜಿ ಹಾಗೂ ಶನಿವಾರ ಸಂತೆಯ ಹೆಗ್ದಳ್ಳಿ ಮಠದ ಶ್ರೀ ಶ್ರೀ ವಿಶ್ವನಾಥ ಸ್ವಾಮೀಜಿ ಭೇಟಿ ನೀಡಿ ಅನುಗ್ರಹ ಸಂದೇಶ ನೀಡಿದರು. ಸಂಸ್ಥೆಯ ಅಧ್ಯಕ್ಷರಿಂದ ವಿದ್ಯಾಸಂಸ್ಥೆಯ ಶೈಕ್ಷಣಿಕ ಅಭಿವೃದ್ದಿಯ ಬಗ್ಗೆ ಸವಿವರ ಪಡೆದ ಶ್ರೀಗಳು ಸಂತಸವ್ಯಕ್ತಪಡಿಸಿದರು. ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್‌ಜೈನ್ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿತಾ ಜೈನ್ ಪರಮ ಪೂಜ್ಯ ಸ್ವಾಮೀಜಿಗಳನ್ನು ಪಾದಪೂಜೆ ಮಾಡಿ ಸ್ವಾಗತಿಸಿದರು. ಬಳಿಕ ಫಲಪುಷ್ಪಗಳೊಂದಿಗೆ ಗೌರವಿಸಲಾಯಿತು. ಮಠದ ವತಿಯಿಂದ ಯುವರಾಜ ಜೈನ್ ಹಾಗೂ ರಶ್ಮಿತಾ ಜೈನ್ ದಂಪತಿಗಳನ್ನು ಸ್ವಾಮೀಜಿಯವರು ಸನ್ಮಾನಿಸಿದರು.