ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ 2022

Sept 5 ರಂದು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಡಾ|| ಸುಬ್ರಹ್ಮಣ್ಯ ಎಡಪಡಿತ್ತಾಯ ಹಾಗೂ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಭೋಜೇ ಗೌಡ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು . ಸಂಸ್ಥೆಯ ವತಿಯಿಂದ ಅಧ್ಯಕ್ಷರ ಹಾಗೂ ಕಾರ್ಯದರ್ಶಿಯವರ ಶಿಕ್ಷಕರಾಗಿದ್ದ ಹತ್ತು ಹಿರಿಯ ಶಿಕ್ಷಕರು/ಪ್ರಾಧ್ಯಾಪಕರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸಂಸ್ಥೆಯ ಶಿಕ್ಷಕರಿಗಾಗಿ ಏರ್ಪಡಿಸಿದ್ದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಅತ್ಯುತ್ತಮ ಶೈಕ್ಷಣಿಕ ಫಲಿತಾಂಶಕ್ಕಾಗಿ ದುಡಿದ ಕಾಲೇಜು ಹಾಗೂ ಶಾಲೆಯ ಎಲ್ಲ ಶಿಕ್ಷಕರನ್ನು ಗೌರವಿಸಲಾಯಿತು.