ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ Jan 12, 2023

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಸ್ವಾಮಿ ವಿವೇಕಾನಂದರ ೧೬೧ನೇ ಜನ್ಮ ದಿನದ ಅಂಗವಾಗಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬಿಕಾ ಶಿಕ್ಷಣ ಸಂಸ್ಥೆಯ ಉಪನ್ಯಾಸಕ ಶ್ರೀಕೃಷ್ಣ ಉಪಾಧ್ಯಾಯ ಮುಖ್ಯ ಅತಿಥಿಯಾಗಿ ಆಗಮಿಸಿ ವಿವೇಕಾನಂದರ ಜೀವ ಮತ್ತು ಚಿಂತನೆಗಳನ್ನು ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಹ ಮುಖ್ಯೋಪಾಧ್ಯಾಯ ಜಯಶೀಲ್ ಭಾರತೀಯರಾದ ನಾವು ವಿವೇಕಾನಂದರ ಆದರ್ಶಗಳನ್ನು ಪಾಲಿಸುತ್ತಾ ನಮ್ಮ ಸಂಸ್ಕೃತಿಯನ್ನು ಗೌರವಿಸಬೇಕು ಎಂದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ಸುಧಾಶ್ರೀ ಹಾಗೂ ನಮ್ಯಶ್ರೀ ವಿವೇಕಾನಂದರ ಜೀವನ ಚರಿತ್ರೆಯ ಕುರಿತು ಮಾತನಾಡಿದರು. ಅಧ್ಯಾಪಕಿ ಜಯಲಕ್ಷ್ಮಿ ಅತಿಥಿಗಳನ್ನು ಸ್ವಾಗತಿಸಿ ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Click here to View All