ಬಾಲಕನ ಚಿಕಿತ್ಸೆಗೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಿಂದ ನೆರವು.

ಬಾಲಕನ ಚಿಕಿತ್ಸೆಗೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಿಂದ ನೆರವು: ತೀವ್ರತರವಾದ ಆರೋಗ್ಯ ಸಮಸ್ಯೆಗೆ ಸಂಬಂಧಿಸಿದಂತೆ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ತುರ್ತುಚಿಕಿತ್ಸಾ ವಿಭಾಗಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸೃಜನ್ ಕುಕ್ಯಾನ್ ನ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕವಾಗಿ ಬೆಂಬಲವನ್ನು ನೀಡಿದ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಯ ಬದುಕಿಗೆ ಸಹಾಯಮಾಡಿದೆ. ಈ ಮಹಾಕಾರ್ಯಕ್ಕೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ಅಧ್ಯಾಪಕ ವೃಂದ , ವಿದ್ಯಾರ್ಥಿಗಳು ಹಾಗೂ ಕೆಲವು ಪೋಷಕರು ಸಹಾಯ ಧನವನ್ನು ನೀಡಿದ್ದು ಎಲ್ಲೆಡೆ ಪ್ರಶಂಸೆಗೆ ಕಾರಣವಾಗಿದೆ. ಈ ಹಿಂದೆಯೂ ಕೂಡ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ, ಇಬ್ಬರೂ ವಿದ್ಯಾರ್ಥಿನಿಯರ ಚಿಕಿತ್ಸೆಗೆ ಸಂಬಂಧಿಸಿದಂತೆ ಆರ್ಥಿಕ ಸಹಾಯ ಹಸ್ತವನ್ನು ನೀಡಿತ್ತು.

Click here to View All